ಕೆಎಸ್‌ಆರ್‌ಟಿಸಿ ಬಸ್‌ – ಸ್ಕೂಲ್‌ ಬಸ್‌ ಅಫಘಾತ : ಇಬ್ಬರೂ ಸಾವು .

Highlights : ರಾಯಚೂರಿ : ಶಾಲಾ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿ ಜಿಲ್ಲೆ ಮಾನ್ವಿ ತಾಲ್ಲೂಕಿನ ಮಾನ್ವಿ ತಾಲ್ಲೂಕಿನ ಕಪಗಲ್‌ ಗ್ರಾಮದ ಬಳಿ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್‌ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಇದರಲ್ಲಿ ಶಾಲಾ ವಾಹನ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಢಿಕ್ಕಿ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ.ಮೂವರು ವಿದ್ಯಾರ್ಥಿಗಳು ಕಾಲುಗಳನ್ನು ಕಳೆದುಕೊಂಡ್ಡಿದ್ದಾರೆ.

ಈ ಅಪಘಾತದಲ್ಲಿ 17 ಮಂದಿ ಗಂಭೀರ ಗಾಯಗಳನ್ನು ಹೊಂದಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ತೀವ್ರತೆಯನ್ನು ಗಮನಿಸಿ ಸ್ಥಳೀಯರು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸರು ಸ್ಥಳಕ್ಕೆ ತಕ್ಷಣವೇ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಿದ್ದಾರೆ.

ಈ ಅಪಘಾತವು ಲೊಯೊಲಾ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಸಂಭವಿಸಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ

ರಾಯಚೂರು ಜಿಲ್ಲೆಯಲ್ಲಿರುವ ಮಾನ್ವಿ ಪಟ್ಟಣದಲ್ಲಿ, ಲೊಯೊಲಾ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವಾಹನಕ್ಕೆ ಭಾರೀ ಅಪಘಾತ ಸಂಭವಿಸಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಬಸ್, ರಾಯಚೂರು ಕಡೆಗೆ ಹೊರಟಿದ್ದಾಗ, ಲೊಯೊಲಾ ಶಾಲೆಯ ಬಸ್ಸಿಗೆ ಗುದ್ದಿದ ಪರಿಣಾಮ ಈ ದುರ್ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಶಾಲಾ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರು ಮಕ್ಕಳ ಸ್ಥಿತಿಯನ್ನು ಚಿಂತಾಜನಕ ಎಂದು ಜಿಲ್ಲಾಧಿಕಾರಿ ನಿತೀಶ್ ಅವರು ಮಾಹಿತಿ ನೀಡಿದ್ದಾರೆ. ತಕ್ಷಣವೇ ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಯಿಂದಾಗಿ ಸ್ಥಳೀಯರು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ಜಿಲ್ಲಾಡಳಿತವು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ಕೈಗೊಂಡಿದೆ.

ಜಿಲ್ಲಾಧಿಕಾರಿ ನಿತೀಶ್ ಈ ದಾರುಣ ಘಟನೆಯ ಕುರಿತು ಪ್ರತಿಕ್ರಿಯಿಸುತ್ತಾ, ಸಾವನ್ನಪ್ಪಿದವರು ಪ್ರತಿಯೊಬ್ಬರ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 3 ಲಕ್ಷ ರೂ. ಪರಿಹಾರವನ್ನು ಸರ್ಕಾರದ ವತಿಯಿಂದ ಘೋಷಿಸಿದ್ದಾರೆ. ಅವರ ಮಾತಿನ ಪ್ರಕಾರ, ಈ ಪರಿಹಾರವನ್ನು ಅಲ್ಲದೇ ರಸ್ತೆ ಸಾರಿಗೆ ಸಂಸ್ಥೆಯಿಂದಲೂ ನೀಡಲಾಗುತ್ತದೆ.

ಇದೇ ವೇಳೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಂದ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅಪಘಾತದ ನಿಖರ ಕಾರಣ ತಿಳಿದುಕೊಳ್ಳಲು ತನಿಖೆ ಆರಂಭವಾಗಿದೆ. ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಈ ರೀತಿಯ ದುರ್ಘಟನೆಗಳನ್ನು ಮುನ್ನೆಚ್ಚರಿಕೆ ಮಾಡುವ ದೃಷ್ಟಿಯಿಂದ ಅಧಿಕಾರಿಗಳು ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

Scroll to Top